BREAKING NEWS : ಕರ್ನಾಟಕದಲ್ಲಿ ಮೊದಲ ಮಂಕಿಪಾಕ್ಸ್ ಕೇಸ್ ಪತ್ತೆ
ಕರ್ನಾಟಕದಲ್ಲಿ ಮೊದಲ ಮಂಕಿಪಾಕ್ಸ್ ಕೇಸ್ ಪತ್ತೆಯಾಗಿದೆ. ಆಫ್ರಿಕಾ ಮೂಲದ ವ್ಯಕ್ತಿಗೆ ರಾಜಧಾನಿ ಬೆಂಗಳೂರಿನಲ್ಲಿ ಮಂಕಿಪಾಕ್ಸ್ ಗುಣ ಲಕ್ಷಣಗಳು ಇರುವುದು ಖಾತ್ರಿಯಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದ ಮೊದಲ ಮಂಕಿಪಾಕ್ಸ್ ಪ್ರಕರಣ ಇದಾಗಿದೆ.
ರಾಷ್ಟ್ರೀಯ ವೈರಾಲಜಿ ಸಂಸ್ಥೆ (ಎನ್‌ಐವಿ) ಸೂಚನೆ ನೀಡಿದಂತೆ 72 ಗಂಟೆಗಳ ಮಧ್ಯಂತರದಲ್ಲಿ 2 ಬಾರಿ ಪರೀಕ್ಷೆಗಳನ್ನು ನಡೆಸಲಾಗಿದೆ. ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಎಲ್ಲರಿಗೂ ಪರೀಕ್ಷೆ ಮಾಡಲಾಗಿದೆ.
ಇನ್ನು, ನಗರದ ಖಾಸಗಿ ಆಸ್ಪತ್ರೆಯಲ್ಲಿ ರೋಗಿಗೆ ಹೆಚ್ಚಿನ ಶುಶ್ರೂಶೆ ಮಾಡಲಾಗುತ್ತಿದೆ. ಜುಲೈ 4ನೇ ತಾರೀಖು ರೋಗಿ ಆಫ್ರಿಕಾದಿಂದ ಬೆಂಗಳೂರಿಗೆ ಬಂದಿದ್ದ. ಕಿಡ್ನಿ ಕಸಿ ಮಾಡಲು ಬಂದಿದ್ದ ಈತನಿಗೆ ಮೈಮೇಲೆ ತುರಿಕೆ ಹಾಗೂ ದೇಹದ ಕೆಲ ಭಾಗದಲ್ಲಿ ಸಣ್ಣ ಗುಳ್ಳೆಗಳು ಕಂಡು ಬಂದಿದೆ ಎಂದು ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಹೇಳಿದ್ದಾರೆ.
0 Comments