CWG 2022: ಕಾಮನ್‌ವೆಲ್ತ್ ಗೇಮ್ಸ್‌ನಿಂದ ನೀರಜ್ ಔಟ್, ಭಾರತಕ್ಕೆ ಪದಕ ಮಿಸ್! ಪಾಕಿಸ್ತಾನಕ್ಕೆ ತೆರೆಯಿತು ಭಾಗ್ಯದ ಬಾಗಿಲು
CWG 2022: ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾರತದ ನೀರಜ್ ಚೋಪ್ರಾ ಅವರೊಂದಿಗೆ ಪಾಕಿಸ್ತಾನದ ಅರ್ಷದ್ ನದೀಮ್ ಮುಖಾಮುಖಿಯಾದಾಗಲೆಲ್ಲ ಅವರು, ನೀರಜ್ ಎದುರು ಸೋಲುಂಡು, ನಿರಾಸೆಯಿಂದ ಹೊರಬರಬೇಕಾಗಿತ್ತು. ಆದರೆ ಈ ಬಾರಿ ಪಾಕಿಸ್ತಾನದ ಜಾವೆಲಿನ್ ಎಸೆತಗಾರನಿಗೆ ಉತ್ತಮ ಅವಕಾಶ ಸಿಕ್ಕಿದೆ.
ಕಾಮನ್‌ವೆಲ್ತ್ ಗೇಮ್ಸ್ (Commonwealth Games) ಇನ್ನೂ ಆರಂಭವಾಗಲೇ ಇಲ್ಲ, ಆದರೆ ಅಷ್ಟರಲ್ಲೇ ಭಾರತಕ್ಕೆ ನಿರಾಸೆಯ ಸುದ್ದಿಯೊಂದು ಹೊರಬಿದ್ದಿದೆ. ಜಾವೆಲಿನ್ ಸ್ಟಾರ್ ಹಾಗೂ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ (Neeraj Chopra) ಬರ್ಮಿಂಗ್ ಹ್ಯಾಮ್ನಲ್ಲಿ ನಡೆಯಲಿರುವ ಕಾಮನ್ ವೆಲ್ತ್ ಗೇಮ್ಸ್ನಲ್ಲಿ ಆಡುತ್ತಿಲ್ಲ. ವಿಶ್ವ ಚಾಂಪಿಯನ್‌ಶಿಪ್ ಬೆಳ್ಳಿ ಪದಕ ವಿಜೇತ ನೀರಜ್ ಚೋಪ್ರಾ ಅವರು ತೊಡೆಸಂದು ಗಾಯದಿಂದಾಗಿ ಕಾಮನ್‌ವೆಲ್ತ್ ಗೇಮ್ಸ್‌ನಿಂದ ಹೊರಗುಳಿದಿದ್ದಾರೆ. ಅವರ ನಿರ್ಗಮನದಿಂದಾಗಿ ಭಾರತಕ್ಕೆ ಹಿನ್ನಡೆಯುಂಟಾಗಿದ್ದರೆ, ಪಾಕಿಸ್ತಾನಕ್ಕೆ ಭಾಗ್ಯದ ಬಾಗಿಲು ತೆರೆದಿದೆ. ಏಕೆಂದರೆ, ಈಗ ಪಾಕಿಸ್ತಾನದ ಜಾವೆಲಿನ್ ಎಸೆತಗಾರ ಅರ್ಷದ್ ನದೀಮ್ (Arshad Nadeem) ಬರ್ಮಿಂಗ್ ಹ್ಯಾಮ್ನಲ್ಲಿ ಪದಕ ಗೆಲ್ಲುವ ಸಾಧ್ಯತೆಗಳು ಹೆಚ್ಚಾಗಿವೆ.
ವಿಶ್ವ ಚಾಂಪಿಯನ್‌ಶಿಪ್‌ನಲ್ಲೂ ಪಾಕಿಸ್ತಾನದ ಅರ್ಷದ್ ನದೀಮ್ ನೀರಜ್ ಚೋಪ್ರಾ ಅವರನ್ನು ಎದುರಿಸಿದ್ದರು. ಅಲ್ಲಿ ಭಾರತದ ನೀರಜ್ ಬೆಳ್ಳಿ ಪದಕ ಗೆದ್ದರೆ, ಪಾಕಿಸ್ತಾನದ ಅರ್ಷದ್ ನದೀಮ್ 5 ನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದರು. ಇದಕ್ಕೂ ಮೊದಲು ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಇಬ್ಬರೂ ಮುಖಾಮುಖಿಯಾದಾಗ, ಪಾಕಿಸ್ತಾನದ ಅರ್ಷದ್ ಅಲ್ಲಿಯೂ 5 ನೇ ಸ್ಥಾನ ಗಳಿಸಿದ್ದರು. ಆದರೆ ಭಾರತದ ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದಿದ್ದರು.
ಅರ್ಷದ್ ನದೀಮ್ಗೆ ಸುವರ್ಣವಕಾಶ
ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾರತದ ನೀರಜ್ ಚೋಪ್ರಾ ಅವರೊಂದಿಗೆ ಪಾಕಿಸ್ತಾನದ ಅರ್ಷದ್ ನದೀಮ್ ಮುಖಾಮುಖಿಯಾದಾಗಲೆಲ್ಲ ಅವರು, ನೀರಜ್ ಎದುರು ಸೋಲುಂಡು, ನಿರಾಸೆಯಿಂದ ಹೊರಬರಬೇಕಾಗಿತ್ತು. ಆದರೆ ಈ ಬಾರಿ ಪಾಕಿಸ್ತಾನದ ಜಾವೆಲಿನ್ ಎಸೆತಗಾರನಿಗೆ ಉತ್ತಮ ಅವಕಾಶ ಸಿಕ್ಕಿದೆ. ಅದೆನೆಂದರೆ, ನೀರಜ್ ಚೋಪ್ರಾ ಕಾಮನ್‌ವೆಲ್ತ್ ಗೇಮ್ಸ್‌ನಿಂದ ನಿರ್ಗಮಿಸಿದ ಕಾರಣ ಈ ಅವಕಾಶ ಸೃಷ್ಟಿಯಾಗಿದೆ. ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ನೀರಜ್ ಚೋಪ್ರಾ ಅವರಿಗೆ ತೊಡೆಸಂದು ಗಾಯವಾಗಿತ್ತು, ಈ ಕಾರಣದಿಂದಾಗಿ ಅವರು ಬರ್ಮಿಂಗ್‌ಹ್ಯಾಮ್‌ಗೆ ಹೋಗದಿರಲು ನಿರ್ಧರಿಸಿದ್ದಾರೆ.
ಅರ್ಷದ್ಗೂ ಇಂಜುರಿ
ನೀರಜ್ ಅವರಂತೆ ಪಾಕಿಸ್ತಾನದ ಅರ್ಷದ್ ನದೀಮ್ ಕೂಡ ಮೊಣಕಾಲಿನ ನೋವಿನಿಂದ ಬಳಲುತ್ತಿದ್ದಾರೆ. ಬಹುಶಃ ಅವರು ಕಾಮನ್‌ವೆಲ್ತ್ ಗೇಮ್ಸ್ ನಂತರ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಬಹುದು. ಏಕೆಂದರೆ ಇದರಲ್ಲಿ ಪದಕ ಗೆಲ್ಲಲು ದಕ್ಷಿಣ ಆಫ್ರಿಕಾಕ್ಕೆ ತೆರಳುವ ಮೂಲಕ ಸಾಟಿಯಿಲ್ಲದ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ ಎಂದು ಪಾಕಿಸ್ತಾನ ಮಾಧ್ಯಮಕ್ಕೆ ನೀಡಿರುವ ಸಂದರ್ಶನದಲ್ಲಿ ಬಹಿರಂಗಪಡಿಸಿದ್ದಾರೆ.
0 Comments