Ticker

6/recent/ticker-posts

Oppo A77s: 33W ಫಾಸ್ಟ್ ಚಾರ್ಜರ್, 50MP ಕ್ಯಾಮೆರಾ: ಒಪ್ಪೋದಿಂದ ಬಜೆಟ್ ಬೆಲೆಗೆ ಬಂಪರ್ ಸ್ಮಾರ್ಟ್​ಫೋನ್ ಬಿಡುಗಡೆ

 

Oppo A77s: 33W ಫಾಸ್ಟ್ ಚಾರ್ಜರ್, 50MP ಕ್ಯಾಮೆರಾ: ಒಪ್ಪೋದಿಂದ ಬಜೆಟ್ ಬೆಲೆಗೆ ಬಂಪರ್ ಸ್ಮಾರ್ಟ್​ಫೋನ್ ಬಿಡುಗಡೆ



ಒಪ್ಪೋ ಸಂಸ್ಥೆಗೆ A ಸರಣಿಯ ಫೋನ್‌ಗಳು ಹೆಚ್ಚಿನ ಹೆಸರು ತಂದುಕೊಟ್ಟಿದೆ. ಇದೀಗ ಭಾರತದಲ್ಲಿ ಈ ಸರಣಿಯಡಿಲ್ಲಿ ಹೊಸ ಸ್ಮಾರ್ಟ್​ಫೋನೊಂದನ್ನು ಅನಾವರಣ ಮಾಡಿದೆ. ಅದುವೇ ಒಪ್ಪೋ ಎ77ಎಸ್ (Oppo A77s).



ಬಜೆಟ್ ಬೆಲೆಯ ಸ್ಮಾರ್ಟ್​ಫೋನ್​ಗೂ (Smartphone) ಸೈ ಮಿಡ್ ರೇಂಜ್ ಮೊಬೈಲ್​ಗೂ ರೆಡಿ ಎಂಬಂತೆ ಆಕರ್ಷಕ ಫೋನ್​ಗಳನ್ನು ಮಾರುಕಟ್ಟೆಗೆ ಪರಿಚಯಿಸಿ ವಿಶೇಷ ಸ್ಥಾನ ಸಂಪಾದಿಸಿರುವ ಚೀನಾ ಮೂಲಕ ಪ್ರಸಿದ್ಧ ಒಪ್ಪೋ (Oppo) ಸಂಸ್ಥೆಗೆ A ಸರಣಿಯ ಫೋನ್‌ಗಳು ಹೆಚ್ಚಿನ ಹೆಸರು ತಂದುಕೊಟ್ಟಿದೆ. ಇದೀಗ ಭಾರತದಲ್ಲಿ ಈ ಸರಣಿಯಡಿಲ್ಲಿ ಹೊಸ ಸ್ಮಾರ್ಟ್​ಫೋನೊಂದನ್ನು ಅನಾವರಣ ಮಾಡಿದೆ. ಅದುವೇ ಒಪ್ಪೋ ಎ77ಎಸ್ (Oppo A77s). ಇದು ಕೂಡ ಬಜೆಟ್ ಬೆಲೆಯ ಫೋನಾಗಿದ್ದು 20,000 ರೂ. ಒಳಗೆ ಖರೀದಿಸಬಹುದು. ಕಡಿಮೆ ಬೆಲೆಯಾಗಿದ್ದರೂ ಇದರಲ್ಲಿ ಅತ್ಯುತ್ತಮ ಫೀಚರ್​ಗಳಿವೆ. ಆಕರ್ಷಕ ಕ್ಯಾಮೆರಾ, 5000mAh ಸಾಮರ್ಥ್ಯದ ಬ್ಯಾಟರಿ ಸೇರಿದಂತೆ ಅನೇಕ ಆಯ್ಕೆಗಳಿವೆ. ಈ ಫೋನಿನ ಬೆಲೆ, ವಿಶೇಷತೆ ಕುರಿತ ಮಾಹಿತಿ ಇಲ್ಲಿದೆ ನೋಡಿ.

  • ಒಪ್ಪೋ A77s ಸ್ಮಾರ್ಟ್‌ಫೋನಿನ ಆರಂಭಿಕ ಬೆಲೆ ಕೇವಲ 17,999 ರೂ., ಈ ಫೋನ್ ಇಂದಿನಿಂದಲೇ ಖರೀದಿಗೆ ಸಿಗಲಿದೆ. ಇದು ವಿಶೇಷವಾದ ಸನ್‌ಸೆಟ್ ಆರೆಂಜ್ ಮತ್ತು ಸ್ಟಾರಿ ಬ್ಲಾಕ್ ಕಲರ್‌ ಆಯ್ಕೆಗಳಲ್ಲಿ ಲಭ್ಯವಿದೆ.
  • ಮೊದಲ ಸೇಲ್ ಪ್ರಯುಕ್ತ ಭರ್ಜರಿ ಆಫರ್ ಕೂಡ ನೀಡಲಾಗಿದ್ದು ಬ್ಯಾಂಕ್‌ ಕಾರ್ಡ್‌ಗಳ ಮೂಲಕ ಶೇ. 10 ಕ್ಯಾಶ್‌ಬ್ಯಾಕ್ ದೊರೆಯಲಿದೆ. 6 ತಿಂಗಳವರೆಗೆ ನೋ ಕಾಸ್ಟ್ ಇಎಂಐ ಆಯ್ಕೆ ಕೂಡ ಲಭ್ಯವಾಗಲಿದೆ.
  • ಒಪ್ಪೋ A77s ಸ್ಮಾರ್ಟ್‌ಫೋನ್‌ 1,612×720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.56 ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇದು 90Hz ರಿಫ್ರೆಶ್ ರೇಟ್ ಬೆಂಬಲಿಸಲಿದೆ.
  • ಸ್ನಾಪ್‌ಡ್ರಾಗನ್ 680SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 12 ಆಧಾರಿತ ColorOS 12.1ನಲ್ಲಿ ರನ್‌ ಆಗಲಿದೆ.
  • ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿದೆ.
  • 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಒಳಗೊಂಡಿದೆ. ಕ್ಯಾಮೆರಾ ಫೀಚರ್​ಗಳಲ್ಲಿ ಒಪ್ಪೋ ಬೊಕೆ ಫ್ಲೇರ್ ಪೋಟ್ರೇಟ್ ಮೋಡ್, ಫೋಕಸ್ ಮತ್ತು ಬ್ಲರ್ ಅನ್ನು ಒದಗಿಸುತ್ತದೆ. ಇದು ಉತ್ತಮ ಕ್ವಾಲಿಟಿ ಫೋಟೋ ಸೆರೆ ಹಿಡಯಲು ಸಹಾಯ ಮಾಡುತ್ತದೆ.
  • ಒಪ್ಪೋ A77s ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 33W ಸೂಪರ್‌ವೂಕ್‌ ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ. ಕಂಪನಿ ಹೇಳಿರುವ ಪ್ರಕಾರ ಈ ಫೋನ್‌ ಕೇವಲ 71 ನಿಮಿಷಗಳಲ್ಲಿ ಸಂಪೂರ್ಣ ಚಾರ್ಜ್‌ ಆಗಲಿದೆಯಂತೆ.
  • ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ ಅನ್ನು ಬೆಂಬಲಿಸಲಿದೆ. ಇದಲ್ಲದೆ IP54 ರೇಟಿಂಗ್, ಸ್ಟೀರಿಯೋ ಸ್ಪೀಕರ್ ಸೆಟಪ್ ಮತ್ತು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಸೇರಿಸಲಾಗಿದೆ.

Post a Comment

0 Comments